ಜುಲೈ 18ರಂದು : ಕೂಳೂರು ರಾ.ಹೆ. ಅವ್ಯವಸ್ಥೆ ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ
ಕೂಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯ ವತಿಯಿಂದ ಜುಲೈ 18ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್‍ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆ ಹೊಂಡ-ಗುಂಡಿಗಳಿಂದ ತುಂಬಿ ಹೋಗಿದೆ. ಇದರಿಂದ ಸ್ಥಳೀಯರ ನಾಗರಿಕೆರಿಗೆ, ವ್ಯಾಪಾರಸ್ತರಿಗೆ, ವಾಹನ ಚಾಲಕರಿಗೆ ಅಂಬ್ಯುಲೆನ್ಸ್, ಕಾರ್ಮಿಕರಿಗೆ, ಶಾಲಾ ಮಕ್ಕಳ ಸ್ಕೂಲ್ ಬಸ್‍ನಲ್ಲಿ ಹೋಗುವವರು ತೊಂದರೆ ಅನುಭವಿಸುತ್ತಿದ್ದಾರೆ.
ಈ ರಸ್ತೆಗೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಜುಲೈ 18ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸುತ್ತಿದ್ದೇವೆ. ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.