Kumble Sundar Rao : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
