ಕುಂದಾಪುರ: ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು
ಕುಂದಾಪುರ : ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸ್ ರು ಭೇಧಿಸಿದ್ದಾರೆ. ಬೀಬಿಜಾನ್ ಶೇಖ್ (58) ಮತ್ತು ಪಾರವ್ವ ಸಿರಗಹಳ್ಳಿ (54) ಕಳ್ಳತನ ಪ್ರಕರಣದಲ್ಲಿ ಬಂಧಿತರು. ಲೋಕೇಶ್ ಮಂಜುನಾಥ ನಾಯ್ಕ ಅವರು ಸುಮಾರು 53.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಖರೀದಿ ಮಾಡಿ ಪರ್ಸಿನಲ್ಲಿಟ್ಟು, ಪತ್ನಿಯ ವ್ಯಾನಿಟಿ ಬ್ಯಾಗಿನಲ್ಲಿ ಹಾಕಿ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ತೆರಳಿದ್ದರು. ದರ್ಶನ ಮುಗಿಸಿ ದೇವಸ್ಥಾನದ ಹೊರಗಡೆ ಬಂದಾಗ ವ್ಯಾನಿಟಿ ಬ್ಯಾಗಿನಲ್ಲಿದ್ದ ಚಿನ್ನ ಇಟ್ಟಿದ್ದ ಪರ್ಸ್ ಮಾಯವಾಗಿತ್ತು. ಕುಂದಾಪುರ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಿದಾಗ ತನಿಖೆ ಆರಂಭಿಸಿದ ಕುಂದಾಪುರ ಪೊಲೀಸರು ದೇವಳದ ಸಿಸಿ ಟಿವಿ ಮತ್ತು ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಗಳನ್ನು ಹುಬ್ಬಳ್ಳಿಯಲ್ಲಿ ಬಂದಿದ್ದಾರೆ. ಬಂದಿತರಿಂದ 3,75,000 ಮೊತ್ತದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.