ಕುಂದಾಪುರ|| ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 20 ಮಂದಿ ಪ್ರಯಾಣಿಕರಿಗೆ ಗಾಯ
ಕುಂದಾಪುರ: ಅತಿ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‍ವೊಂದು ಚಾಲಕ ನಿಯಂತ್ರಣ ತಪ್ಪಿ ಅರಾಟೆ ಎಂಬಲ್ಲಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ಪಕ್ಕದ ರಸ್ತೆಗೆ ಉರುಳಿದ ಘಟನೆ ನಡೆದಿದೆ.
ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಸುಮಾರು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪುರದಿಂದ ಪ್ರಯಾಣಿಕರನ್ನು ಹೊತ್ತ ಬಸ್ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಮಾರ್ಗದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಬಸ್ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ಅರಾಟೆಯಲ್ಲಿ ಹೆಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಉರುಳಿದೆ.
ಅಪಘಾತದ ಹೊಡೆತಕ್ಕೆ ಬಸ್ ಸಂಪೂರ್ಣ ಜಖಂಗೊಂಡಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಅದೃಷ್ಟವಶಾತ್ ಎಂಬಂತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಬಾರಿ ದೊಡ್ಡ ದುರಂತವೊಂದು ತಪ್ಪಿದ ಘಟನೆ ಅರಾಟೆಯಲ್ಲಿ ಸಂಭವಿಸಿದೆ. ಖಾಸಗಿ ಬಸ್ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.