ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ಯುವಕ : ಅಸಭ್ಯ ವರ್ತನೆಗೆ ವಿದ್ಯಾರ್ಥಿನಿಯಿಂದ ತಕ್ಕ ಪಾಠ

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಎಂದಿನಂತೆ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಉಡುಪಿ ಜಿಲ್ಲೆಯ ಬಾರಕೂರು ಮೂಲದ ನಜೀರ್ (35) ಎಂಬಾತ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ್ದಾನೆ. ಈ ವಿಚಾರವಾಗಿ ವಿದ್ಯಾರ್ಥಿನಿ ಜೋರಾಗಿ ಕೂಗಿದ್ದು, ಸ್ಥಳೀಯರು ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿದರು. ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದಾಗ, ವಿದ್ಯಾರ್ಥಿನಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ ನಡುರಸ್ತೆಯಲ್ಲೇ ವಿದ್ಯಾರ್ಥಿನಿ ಆರೋಪಿಗೆ ಚಪ್ಪಲಿ ಏಟು ನೀಡಿ ತಕ್ಕ ಶಾಸ್ತಿ ಮಾಡಿದ್ದಾಳೆ. ಸ್ಥಳೀಯರೆಲ್ಲ ಸೇರಿ ಆರೋಪಿ ನಜೀರ್ ನ್ನು ಪೊಲೀಸರಿಗೆ ಒಪ್ಪಿಸಿ, ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.