ಕುಂದಾಪುರ: ಕೊಲ್ಲೂರು ದೇವಳಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ
ಕುಂದಾಪುರ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕೊಲ್ಲೂರು ಶ್ರೀ ಮೂಕಾಂಬಿಕ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೀರಭದ್ರ ದೇವರಿಗೆ ಕಾಯಿ ಸಮರ್ಪಿಸಿದದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೆ ಎಸ್ ಈಶ್ವರಪ್ಪ, ಯಾವಾಗಲೂ ಕೊಲ್ಲೂರಿಗೆ ಆಗಮಿಸಿತಾಯಿಯ ದರ್ಶನ ಪಡೆಯುತ್ತಿರುತ್ತೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಕಾಂತೇಶ್ ಹಾವೇರಿಯಿಂದ ಸ್ಪರ್ಧೆ ಮಾಡಬೇಕು ಎಂದು ಬಯಸಿದ್ದಾನೆ. ಈ ಬಗ್ಗೆ ಮೂಕಾಂಬಿಕೆಯ ಬಳಿ ಪೂಜೆ ಮಾಡಿ ಬೇಡಿಕೊಂಡಿದ್ದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಪ್ರಾರ್ಥಿಸಿದ್ದು, ಕಾಂತೇಶ್ ಗೆ ಟಿಕೆಟ್ ಸಿಕ್ಕಿ ಗೆಲ್ಲುತ್ತಾನೆ ಎಂಬ ವಿಶ್ವಾಸವಿದೆ ಎಂದರು.
ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿ ಜಯ ಪಡೆದು ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿ. ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಚಾರಗಳ ಬಗ್ಗೆ ಇಲ್ಲಿ ನಾನು ಮಾತನಾಡಲ್ಲ. ದೇವಸ್ಥಾನದಲ್ಲಿ ಒಳ್ಳೆಯ ವಿಚಾರಗಳನ್ನು ಮಾತನಾಡಲು ಇಷ್ಟಪಡುತ್ತೇನೆ. ಕಾಂತೇಶ್ ಗೆ ಟಿಕೆಟ್ ಸಿಗುತ್ತೆ ಅವನು ಚುನಾವಣೆಯಲ್ಲಿ ಗೆಲ್ಲುತ್ತಾನೆ, ಮೋದಿ ಪ್ರಧಾನಿ ಆಗಲಿದ್ದಾರೆ ಎಂದರು.