ಕುಂದಾಪುರ:ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭ

ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ನಡೆದ ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭದಲ್ಲಿ ಮಾತನಾಡಿದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ಭಾರತ್ ಸ್ಕೌಟ್ & ಗೈಡ್ಸ್ ನ ಜಿಲ್ಲಾ ಚೀಫ್ ಕಮಿಷನರ್ ಜಯಕರ ಶೆಟ್ಟಿ ಇಂದ್ರಾಳಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಜವಾಬ್ದಾರಿ, ನಾಯಕತ್ವ ಮೈಗೂಡಿಸಿಕೊಳ್ಳುವ ಸಲುವಾಗಿ ಮಂತ್ರಿಮಂಡಲ ರಚನೆ ಮಾಡಲಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಚಾರಗಳ ಬಗ್ಗೆ ಗುರಿ, ಕನಸು ಇಟ್ಟುಕೊಳ್ಳಬೇಕು. ವಿದ್ಯೆ ಎಂದರೆ ಪಾಠ ಪ್ರವಚನ ಮಾತ್ರವಲ್ಲ. ಪಠ್ಯೇತರ ಚಟುವಟಿಗಳಲ್ಲೂ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದರು.

ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ, ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ ಉಪಸ್ಥಿತರಿದ್ದರು.

add - Rai's spices

Related Posts

Leave a Reply

Your email address will not be published.