ಕುರ್ಚಿ ಉಳಿಸಿ ಬಜೆಟ್: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ‘ಕುರ್ಚಿ ಉಳಿಸಿ ಬಜೆಟ್’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

‘ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ‘ಪೊಳ್ಳು ಭರವಸೆ’ಗಳನ್ನು ನೀಡಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ‘2024ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್‌ಗಳ ‘ಕಾಪಿ-ಪೇಸ್ಟ್’ ಬಜೆಟ್ ಇದಾಗಿದೆ’ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ದಾಖಲೆಯ ಸತತ 7ನೇ ಬಜೆಟ್‌ನಲ್ಲಿ, ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ಘೋಷಿಸಿದ್ದರು. ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷಗಳಾದ ಜೆಡಿಯು ಬಿಹಾರದಲ್ಲಿ ಮತ್ತು ಟಿಡಿಪಿ ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದೆ.

Related Posts

Leave a Reply

Your email address will not be published.