ಖ್ಯಾತ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ನಿಧನ

ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅಸೌಖ್ಯದಿಂದ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ದಕ್ಷಿಣ ಕನ್ನಡದ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ ಗೌಡರ ಹಾಗೂ ಗೌರಮ್ಮನವರ ತೃತೀಯ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಪುತ್ತೂರಿನ ಬೋರ್ಡ್ ಹೈಸ್ಕೂಲಿನಲ್ಲಿ ಮಾಡಿದರು. ಮಡಿಕೇರಿ ಸರಕಾರಿ ಕಾಲೇಜಿನಲ್ಲಿ ಬಿ.ಎ. ಮಾಡಿ 1956ರಲ್ಲಿ ಮದರಾಸು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವೀಧರರಾದರು.

ಇವರ ಸುಮಾರು 17 ಕೃತಿಗಳು ಪ್ರಕಟವಾಗಿವೆ. 4 ಪುಸ್ತಕಗಳು ಅಂಗ್ಲ ಭಾಷೆಯಲ್ಲಿ, 70 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಕನ್ನಡ ಮತ್ತು ಇಂಗ್ಲಿಷ್‍ನಲ್ಲಿ ಪ್ರಕಟಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕೈಫಿಯತ್ತುಗಳು ಮಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಇವರ ಪ್ರತಿಭೆಗೆ ಸೋವಿಯತ್ ಲ್ಯಾಂಡಿನ ಚಿನ್ನದ ಪದಕ ದೊರೆತಿದೆ. ಕನ್ನಡ ಭಾಷಾವಲೋಕನವೆಂಬ ಗ್ರಂಥವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ವರ್ಷದ ಉತ್ತಮ ಸೃಜನಶೀಲ ಗ್ರಂಥವೆಂದು ಆಯ್ಕೆ ಮಾಡಿದೆ. ಹೊರನಾಡಿನಲ್ಲಿದ್ದು ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಕೊಟ್ಟ ಕೊಡುಗೆಯನ್ನು ಗಮನಿಸಿ ಕರ್ನಾಟಕ ಸಾಹಿತ್ಯ ಅಕಾಡಮಿ 1987 ರಲ್ಲಿ ಗೌರವ ಪ್ರಶಸ್ತಿಯನ್ನು ಹಾಗೂ ಕರ್ನಾಟಕ ಸರಕಾರ ` ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

INDUSCARE EQUIPMENTS

Related Posts

Leave a Reply

Your email address will not be published.