ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ : ಖುಷ್ಬೂ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.
ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆ ಅಲ್ಲ. ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ. ನಮ್ಮದು ಮಹಿಳೆಯರ ರಕ್ಷಣೆಗೆ ಇರುವ ಸಂಸ್ಥೆ ಎಂದರು. ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಬೇಡಿ. ನಮಗೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಯಾವುದೇ ಫೆÇೀಟೋ ಅಥವಾ ವಿಡಿಯೋ ಲಭ್ಯವಿಲ್ಲ. ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರ ಸ್ಪಷ್ಟತೆ ಸಿಗಬೇಕು ಎಂದರು.