ಉಡುಪಿ: ಸೆ.22ರಂದು ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆಯಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 22ರಂದು 2 ಗಂಟೆಗೆ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಲಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮಹಾಸಂಸ್ಥಾನಕ್ಕೆ ಪ್ರಥಮಬಾರಿ ಆಗಮಿಸಲಿರುವ ಸಚಿವರನ್ನು, ಮಹಾ ಸಂಸ್ಥಾನದ ಸಹ ಟ್ರಸ್ಟ್ ಮತ್ತು ಸಮಿತಿ ಮುಖ್ಯಸ್ಥರುಗಳ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಮಹಾಸಂಸ್ಥಾನದ ವತಿಯಿಂದ ಅಭಿನಂದಿಸಲಾಗುವುದು. ಸಮಾಜ ಬಾಂಧವರು, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಹಾಗೂ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ತಿಳಿಸಿದ್ದಾರೆ.