ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ || LOKAYUKTA ARRESTED JYOTHI N POOJARY, CONVENOR OF NIRANJAN SWAMY SCHOOL MANAGEMENT IN BAJPE.
ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ 5 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಅನುದಾನಿತ ಶಾಲಾ ಸಂಚಾಲಕಿಯನ್ನು ಲೋಕಾಯುಕ್ತ ಪೋಲಿಸ್ರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ.
ಅದೇ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಹಾಕಲು ಜ್ಯೋತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರು ನೀಡಲಾಗಿತ್ತು.
ಲೋಕಾಯಯಕ್ತ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಚೆಲುವರಾಜ, ಕಲಾವತಿ, ಇನ್‍ಸ್ಪೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.