ಲೋಕಾಯುಕ್ತ ಅಬ್ಬರ : ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮನೆಗೆ ದಾಳಿ
ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಅವರ ಉಡುಪಿಯ ಕೊರಂಗ್ರಪಾಡಿಯಲ್ಲಿರುವ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮೇ 31 ರ ಬುಧವಾರದಂದು ದಾಳಿ ನಡೆಸಿದ್ದಾರೆ. ಬೆಳಗ್ಗೆ ಆರಂಭಗೊಂಡ ಶೋಧ ಕಾರ್ಯಾಚರಣೆ ತಡರಾತ್ರಿ ವರೆಗೂ ನಡೆಸಲಾಗಿತ್ತು. ದಾಳಿ ವೇಳೆ ಕುಮಾರ್ ರವರ ನಿವಾಸದಲ್ಲಿ ಚಿನ್ನಾಭರಣ, ಐಷಾರಾಮಿ ಕಾರು, ಬೆಲೆಬಾಳುವ ಪೀಠೋಪಕರಣಗಳು, ಲಕ್ಷಾಂತರ ರೂಪಾಯಿ ನಗದು ಹಾಗೂ ಹೊರಜಿಲ್ಲೆಯಲ್ಲಿರುವ ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂದೂ ಕಾರ್ಯಾಚರಣೆ ಮುಂದುವರಿಯಲಿದ್ದು, ಬ್ಯಾಂಕ್ ದಾಖಲೆ ಹಾಗೂ ಲಾಕರ್‌ಗಳ ಪರಿಶೀಲನೆ ನಡೆಯಲಿದೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ. ಸೈಮನ್ ಮಾರ್ಗದರ್ಶನದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.