ಲಂಡನ್ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಡಾ. ಪ್ರಭಾ ಶೆಟ್ಟಿ ಆಯ್ಕೆ
ಲಂಡನ್ ಬಂಟ್ಸ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಡಾ. ಪ್ರಭಾ ಶೆಟ್ಟಿ, ಕಾರ್ಯದರ್ಶಿಯಾಗಿ ಜೀವಿತ ಚೌಟ, ಕೋಶಾಧಿಕಾರಿಯಾಗಿ ಧೀರಜ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರ್ಚನಾ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಅಭಿನಂದನಾ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲತಾ ಶೆಟ್ಟಿ, ಸಬೀನಾ ಶೆಟ್ಟಿ, ಅಕ್ಷತಾ ಶೆಟ್ಟಿ, ದಿವ್ಯ ಶೆಟ್ಟಿ, ರಮೇಶ್ ಶೆಟ್ಟಿ, ಸೊಲ್ಮೆ ಶೆಟ್ಟಿ, ಧ್ವನಿ ಹೆಗ್ಡೆ ಆಯ್ಕೆಯಾಗಿದ್ದಾರೆ.


















