ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಅಗತ್ಯ ಇಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸಲು ಸಂಘ ಪರಿವಾರದ ಸಂಘಟನೆಗಳು ಮನವಿ ಮಾಡಿದ್ದು, ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದ್ದು, ಪ್ರತ್ಯೇಕ ಕಾನೂನು ರೂಪಿಸುವ ಅವಶ್ಯ ಕತೆ ಸದ್ಯಕ್ಕೆ ಇಲ್ಲ ಎಂದರು.ಇನ್ನು ವ್ಯಕ್ತಿಯೊಬ್ಬ ತನಗೆ ಇಷ್ಟ ವಾದ ಧರ್ಮ ಅನುಸರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಮತ್ತೊಂದು ಧರ್ಮ ಅನುಸರಿಸುವ ಮುನ್ನ ಅರ್ಜಿ ಸಲ್ಲಿಸಬೇಕು. ಆಮಿಷವೊ ಅಥವಾ ಬಲ ವಂತದ ಮತಾಂತರವೊ ಎಂದು ಪರಿಶೀಲಿಸಿ ಅನುಮತಿ ನೀಡಲಾಗುವುದು ಎಂದು ಹೇಳಿದ್ದಾರೆ.
