ಬ್ರಹ್ಮಾವರ|| ನಾರಾಯಣ ಗುರುಗಳು ಹಿಂದುಳಿದ ವರ್ಗಗಳ ಶಕ್ತಿ: ಸಚಿವ ಮಧು ಬಂಗಾರಪ್ಪ
ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಾವರ ನಾರಾಯಣ ಗುರು ಸಭಾ ಭವನದ ಬಳಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸಿದರು.
ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮಹಾ ಪುರುಷರ ದಿನಾಚರಣೆಗೆ ಸರಕಾರಿ ರಜೆ ನೀಡಿದಲ್ಲಿ ಮಹಾಪುರಷರನ್ನು ಮರೆತು ರಜೆಯ ಮಜಾ ಹೆಚ್ಚುತ್ತದೆ. ಬದಲಾಗಿ ಅಂದು ಶಾಲಾ ಕಾಲೇಜಿನಲ್ಲಿ ಅವರ ಕುರಿತು ಮಾಹಿತಿ ಮತ್ತು ಸಾಧನೆ ಹೇಳುವಂತಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಬಿಲ್ಲವ ಸಮಾಜದ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಚುನಾಯಿತರಾದವರನ್ನು ಮತ್ತು ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಿ. ಎನ್. ಶಂಕರ ಪೂಜಾರಿ, ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಮಾಜಿ ಶಾಸಕರಾದ ವಿನಯ ಕುಮಾರ್ ಸೊರಕೆ, ಗೋಪಾಲ್ ಪೂಜಾರಿ ಮತ್ತು ವಿವಿಧ ಕ್ಷೇತ್ರದ ಶಿಲ್ಪಾ ಜಿ ಸುವರ್ಣ , ವಸಂತಿ ಪೂಜಾರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.