ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮುಂಚೆಯೇ ಸುಳಿವು ಸಿಕ್ಕಿತ್ತು. ಹೀಗಾಗಿಯೇ ಅವರೊಂದಿಗೆ ಮಾತುಕತೆಗೆ ಯತ್ನಿಸಿದ್ದೆವು. ಅಂತಿಮವಾಗಿ ಅವರು ಮೈತ್ರಿಕೂಟ ಬಿಡುವುದು ನಿಜವಾಗಿದೆ. ಅವರು ಹೋದರೂ ನಮ್ಮ ಹೋರಾಟ ಮುಂದುವರೆಯಲಿದೆ‘ ಎಂದರು.