ಮಂಗಳೂರು: ಬೋಂದೆಲ್‍ನ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶಾತಿ ಅವಧಿ ವಿಸ್ತರಣೆ

ಮಂಗಳೂರಿನ ಬೋಂದೆಲ್‍ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಥಮ ಸೆಮಿಸ್ಟರ್ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಾಲಿಟೆಕ್ನಿಕ್‍ಗಳಲ್ಲಿ ಪ್ರವೇಶ ಪಡೆಯಲು ಅವಧಿಯನ್ನು ವಿಸ್ತರಿಸಿದ್ದಾರೆ. ಸಂಸ್ಥೆಗಳ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯ ಮೇರೆಗೆ ಪ್ರಥಮ ಸೆಮಿಸ್ಟರ್‍ನಲ್ಲಿ ಭರ್ತಿ ಆಗದ ಉಳಿಕೆ ಸೀಟುಗಳಿಗೆ ನಿಯಮಗಳ ಪ್ರಕಾರ ಸೆಪ್ಟಂಬರ್ 24ರ ಒಳಗೆ ಪ್ರವೇಶ ಪಡೆಯಲು ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಪ್ರವೇಶಾವಧಿಯನ್ನು ವಿಸ್ತರಿಸಿ ಅನುಮತಿ ನೀಡಲಾಗಿದೆ.

Related Posts

Leave a Reply

Your email address will not be published.