ಮಂಗಳೂರು-ಕಟ್ಟಡ ಕಾರ್ಮಿಕರ ವಿವಿಧ ಸಮಸ್ಯೆ ಬಗೆಹರಿಸಬೇಕು : ಭಾರತೀಯ ಮಜುದೂರ್ ಸಂಘ

ಕಟ್ಟಡ ಕಾರ್ಮಿಕರ ಹಾಗೂ ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಸರ್ಕಾರ ಶೀಘ್ರದಲ್ಲೇ ಬಗೆಹರಿಸಬೇಕೆಂದು ಭಾರತೀಯ ಮಜ್ದೂರು ಸಂಘ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೆ.ವಿ. ವಿಶ್ವನಾಥ್ ಶೆಟ್ಟಿ ಅವರು, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ದೊರಕಬೇಕು.

ಇಎಸ್‍ಐ ವ್ಯಾಪ್ತಿಗೆ ತರಬೇಕು ಹಾಗೂ ಪಿಎಫ್ ವ್ಯವಸ್ಥೆ ಜಾರಿಗೊಳಿಸಬೇಕು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮನೆ ಹಾಗೂ ನಿವೇಶನವನ್ನು ನೀಡಬೇಕು ಹಾಗೂ ಇದಕ್ಕೆ ಮಂಡಳಿಗೆ ಸಲ್ಲಿಸಬೇಕಾದ ದಾಖಲೆಗಳ ನಿಯಮಗಳನ್ನು ಸರಳೀಕರಣಗೊಳಿಸಬೇಕು ಮರಣ ಹೊಂದಿದ ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನ ಹಾಗೂ ಇತರ ಆರ್ಥಿಕ ಸಹಾಯವನ್ನು ಮಾಡುವ ಯೋಜನೆಯನ್ನು ಜಾರಿಗೆ ತರಬೇಕು ಕಾರ್ಮಿಕರಿಗೆ ಬಡ್ಡಿ ರಹಿತ ಸಾಲ ನೀಡುವ ಯೋಜನೆ ಜಾರಿಯಾಗಬೇಕು. ಅಪಘಾತ ಅಥವಾ ಅನಾರೋಗ್ಯಕ್ಕೀಡಾದ ಸಂದರ್ಭದಲ್ಲಿ ವಿಶ್ರಾಂತಿ ಸಮಯದಲ್ಲಿ ವಿಶ್ರಾಂತಿ ಭತ್ಯೆಯನ್ನು ನೀಡುವಂತಹ ಯೋಜನೆ ಜಾರಿಯಾಗಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಭಾರತೀಯ ಮಜುದೂರ್ ಸಂಘದ ಕಾರ್ಯದರ್ಶಿ ಗೋಪಾಲಕೃಷ್ಣ, ಜಯರಾಜ್ ಸಾಲ್ಯಾನ್, ಕುಮಾರ್‍ನಾಥ್ ಶೆಟ್ಟಿ, ಭಗವನ್ ದಾಸ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.