ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹ:ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಶ್ರೀನಿವಾಸ್ ನಾಯಕ್ ಇಂದಾಜೆಗೆ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಪತ್ರಿಕಾ ರಂಗದ ಸಾಧಕ ಪ್ರಶಸ್ತಿ ಯನ್ನು ನವೆಂಬರ್ 16 ರಂದು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ71 ನೇ ಅಖಿಲ ಭಾರತ ಸಹಕಾರ ಸಪ್ತಾಹ ದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಜೂನಿಯರ್ ಚೇಂಬರ್ ಔಟ್ಸ್ ಸ್ಟ್ಯಾಂಡಿಂಗ್ ಯಂಗ್ ಅಚೀವರ್ಸ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

add - LED Zone

Related Posts

Leave a Reply

Your email address will not be published.