ಮಂಗಳೂರು: ಪಂಪ್ವೆಲ್ ಬಳಿ ಭೀಕರ ಅಪಘಾತ
ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಸಮಿತ್ ಶೆಟ್ಟಿ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಪೊಲೀಸರು ತಿಳಿಸಿದ್ದಾರೆ.