ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ
ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ.
ಟ್ರಕ್‌ನಲ್ಲಿ ತುಂಬಿದ್ದ ಕೋಲ್‌ನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಅಗ್ನಿಶಾಮಕದಳಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಟ್ರಕ್‌ನ ಮೇಲೇರಿ ಹೊಗೆಯನ್ನು ಸಂಪೂರ್ಣವಾಗಿ ಮೂಲಕ ಮುಂದೆ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದನ್ನು ತಪ್ಪಿಸಿದ್ದಾರೆ