ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ, ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಹಾಗೂ ಜನರಿಗೆ ರಕ್ಷಣೆ ನೀಡಲು ಆಗ್ರಹಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮಹಾನಗರ ಪಾಲಿಕೆಯ ಎದುರಿನ ಲಾಲ್‍ಬಾಗ್ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಮಣಿಪುರದಲ್ಲಿ ಗಲಭೆ ಆರಂಭವಾಗಿ 3 ತಿಂಗಳಾದರೂ ಬಿಜೆಪಿಯ ಮುಖಂಡರು ಇದರ ಬಗ್ಗೆ ಮಾತನಾಡುತ್ತಿಲ್ಲ, ಪ್ರಭಾಕರ್ ಭಟ್ ಕಲ್ಲಡ್ಕ, ನಳಿನ್ ಕುಮಾರ್ ಕಟೀಲು ಮಣಿಪುರ ಘಟನೆಯನ್ನು ಖಂಡಿಸಿಲ್ಲ ಹಾಗಾದ್ರೆ ಬಿಜೆಪಿಯಲ್ಲಿ ಒಬ್ಬನೇ ಒಬ್ಬ ಪುರುಷ ಕೂಡ ಇಲ್ವಾ, ಬಿಜೆಪಿ ಇದ್ದರೆ ದೇಶದಲ್ಲಿ ಮಹಿಳೆಯರ ರಕ್ಷಣೆ ಸಾದ್ಯವಿಲ್ಲ, ಇನ್ನೊಂದು ಉಡುಪಿಯಾಗಲು ದ.ಕ ಜಿಲ್ಲೆಯನ್ನು ಬಿಡುವುದಿಲ್ಲ ಎಂದರು.
ಆನಂತರ ಮಾಜಿ ಎಂಎಲ್‍ಸಿ ಐವನ್ ಡಿಸೋಜಾ ಅವರು ಮಾತನಾಡಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್, ಮಾಜಿ ಶಾಸಕ ಜೆ.ಆರ್ ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಮಾಜಿ ಮೇಯರ್ ಕವಿತಾ ಸನಿಲ್, ಕಾಂಗ್ರೆಸ್ ಮುಖಂಡೆ ಶಾಲೆಟ್ ಪಿಂಟೋ, ಪ್ರಕಾಶ್ ಸಾಲ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.