ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್
ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಆರೋಪಿಗಳು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸುವವರನ್ನು ಗುರುತಿಸಿದ್ದೇವೆ. ನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ನೀಡಲಾಗಿದೆ. ಅವರನ್ನಗಡಿಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಹೀಗಾಗಿ ಅವರಿಗೆ ನೋಟೀಸ್ ಜಾರಿ ಮಾಡಿದ್ದೇವೆ. ಗಡಿಪಾರು ಪ್ರಕ್ರಿಯೆ ಆಗಲಿದೆ ಎಂದು ತಿಳಿಸಿದರು