ಮಂಗಳೂರು ದಸರಾ ಸಂಪನ್ನ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾ ಯಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಆರಂಭಗೊAಡು, ಗುರುವಾರ ಮುಂಜಾನೆ ವರೆಗೆ ವೈಭವದಿಂದ ನಡೆದು ಸಂಪನ್ನಗೊoಡಿತು.
ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಜನರು ಕಣ್ತುಂಬಿಕೊAಡರು. ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾ ಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ಹೊರಟ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್‌ಬಾಗ್, ಬಲ್ಲಾಳ್‌ಬಾಗ್, ಪಿವಿಎಸ್ ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಕಾರ್‌ಸ್ಟಿçÃಟ್, ಅಳಕೆಯ ಮೂಲಕ ಮತ್ತೆ ಶ್ರೀಕ್ಷೇತ್ರಕ್ಕೆ ತಲುಪಿತು.
ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿ ವಿಸರ್ಜನ ಪೂಜೆ ಸಂಜೆ ನೆರವೇರಿತು. ಮೇಯರ್ ಜಯಾನಂದ ಅಂಚನ್, ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಉಪಾಧ್ಯಕ್ಷರಾದ ಉರ್ಮಿಳ ರಮೇಶ್, ಖಜಾಂಚಿ ಪದ್ಮರಾಜ್ ಆರ್, ಪ್ರಮುಖರಾದ ಮಾಲತಿ ಜನಾರ್ದನ ಪೂಜಾರಿ, ಮಾಧವ ಸುವರ್ಣ, ಹರಿಕೃಷ್ಣ ಬಂಟ್ವಾಳ, ಡಾ| ಬಿ.ಜಿ. ಸುವರ್ಣ, ಎಂ. ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಈ ಬಾರಿ ನವದುರ್ಗೆಯರ ಸಹಿತ ಶಾರದಾ ಮಾತೆಯ ವಿಗ್ರಹಗಳು ಶೋಭಾಯಾತ್ರೆಯಲ್ಲಿ ಮುಂದೆ ಸಾಗಿದ ಬಳಿಕ ಸ್ತಬ್ಧಚಿತ್ರಗಳು ಅನುಸರಿಸಿದವು. ಕಲಾ ತಂಡಗಳು, ಬಣ್ಣದ ಕೊಡೆಗಳು, ಚೆಂಡೆ ವಾದ್ಯ ಮತ್ತು ವಿವಿಧ ಕಲಾ ಪ್ರಕಾರಗಳು ಹೊಸ ರಂಗು ನೀಡಿದವು. ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮಗಳು ಮನಸೂರೆಗೊಂಡವು. ರಸ್ತೆ ಬದಿಯಲ್ಲಿ ವ್ಯಾಪಾರ-ವಹಿವಾಟು ಕೂಡ ಜೋರಾಗಿತ್ತು.
ವಿವಿಧ ಜಿಲ್ಲೆಗಳಲ್ಲಿ ಖ್ಯಾತಿ ಗಳಿಸಿ ರುವ ಆಕರ್ಷಣೀಯ ಜನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಗಮನಸೆಳೆದವು. ನಂದಿದ್ವಜ ಕುಣಿತ, ಕರಡಿಮಜಲು, ಭಜನೆ ಕುಣಿತ, ಹಲಗಿ ಮಜಲು, ಕಂಸಾಳೆ,ಪಟ ಕುಣಿತ, ಗೊರವರ ಕುಣಿತ, ಪುರವಂತಿಕೆ, ಹಗಲುವೇಷ, ಜಗ್ಗಲಿಗೆ, ಡೊಳ್ಳು ಕುಣಿತ, ಮಹಿಳಾವೀರಗಾಸೆ, ಲಂಬಾಣಿ ನೃತ್ಯ, ಸಂಬಳಾವಾಸನ, ಸೋಮನ ಕುಣಿತ, ಝಂಜ್ ಮೇಳ, ಭಜನಾ ತಂಡ, ಕೊರಗರ ಡೋಲು ಕುಣಿತ, ಕಂಗಿಲು, ಚೆಂಡೆ, ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ವೈಶಿಷ್ಟ್ವವ ಸಾರುವ, ಅಲ್ಲಿನ ಸಂಸ್ಕöÈತಿ ಬಿಂಬಿಸುವ ವಿವಿಧ ಜನಪದ ಕಲಾತಂಡಗಳು ಮೆರವಣಿಗೆಯ ಸೊಬಗು ಹೆಚ್ಚಿಸಿದವು.