ಮಂಗಳೂರು : ಗೃಹರಕ್ಷಕಿ ಜಯಂತಿಗೆ ಸನ್ಮಾನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಮಂಗಳೂರು ಘಟಕದ ಗೃಹರಕ್ಷಕಿ ಶ್ರೀಮತಿ ಜಯಂತಿ ಇವರನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿದರು. ಶ್ರೀಮತಿ ಜಯಂತಿ ಅವರು 16-10-2018 ರಲ್ಲಿ ಗೃಹರಕ್ಷಕ ದಳಕ್ಕೆ ಸೇರ್ಪಡೆಯಾಗಿ ಸುಮಾರು 6 ವರ್ಷಗಳಿಂದ ನಿಷ್ಕಾಮ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶದೊಂದಿಗೆ ಗೃಹರಕ್ಷಕ ಇಲಾಖೆಗೆ ಸೇರಿದ ಬಳಿಕ ಹಬ್ಬ ಹರಿದಿನಗಳಲ್ಲಿ ಕಾನೂನು ಪಾಲನೆ, ಚುನಾವಣೆ ಬಂದೋಬಸ್ತ್ ಕರ್ತವ್ಯ ಮುಂತಾದವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀಮತಿ ಜಯಂತಿ ಅವರು ಸಮಾದೇಷ್ಟರಿಗೆ ಹಾಗೂ ಗೃಹರಕ್ಷಕರಿಗೆ ಧನ್ಯವಾದ ತಿಳಿಸಿದರು.

ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಅವರು ಮಾತನಾಡಿ ಇಲಾಖೆಯ ಘನತೆ ಗೌರವವನ್ನು ಎತ್ತಿ ಹಿಡಿಯಿರಿ ಹಾಗೂ ಉತ್ತಮ ಕರ್ತವ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳ ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಎ., ಮೂಡಬಿದ್ರಿ ಘಟಕದ ಪ್ರಭಾರ ಘಟಕಾಧಿಕಾರಿ ಚಂದ್ರಶೇಖರ್, ಉಳ್ಳಾಲ ಘಟಕದ ಗೃಹರಕ್ಷಕ ಸಂತೋಷ್, ಸಂಜಯ್ ಶೆಣೈ, ಸುಲೋಚನಾ, ಖತೀಜಮ್ಮ, ಮುಂತಾದವರು ಉಪಸ್ಥಿತರಿದ್ದರು.

add - Anchan ayurvedic

Related Posts

Leave a Reply

Your email address will not be published.