🛑 ಮಂಗಳೂರು: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ-ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಕಲಚೇತನ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಮುಂಬೈನಲ್ಲಿ ನೆಲೆಸಿರುವ ಬಿಹಾರ ಮೂಲದ ಅಬ್ದುಲ್ ಹಲೀಂ (37) ಮತ್ತು ಕುಲಶೇಖರ ನಿವಾಸಿ ಶಮೀನಾ ಬಾನು (22) ಎಂದು ಗುರುತಿಸಲಾಗಿದೆ.

ಮನ್ಸೂರ್ ಅಹಮದ್ ಬಾಬಾ ಶೇಖಾ ಎಂಬವರು ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಈ ಸಂದರ್ಭ ಅವರನ್ನು ನೋಡಲು ಅಸ್ಪತೆಗೆ ಬಂದಿದ್ದ ಆತನ ಅಕ್ಕ ತನ್ನ ವಿಕಲಚೇತನ ಅಪ್ರಾಪ್ತ ಬಾಲಕಿಯನ್ನು ಸಹೋದರನ ಪತ್ನಿ ಶಮೀನಾ ಬಾನು ಎಂಬಾಕೆಯೊಂದಿಗೆ ಬಿಟ್ಟು ಹೋಗಿದ್ದರು. ಈ ಸಂದರ್ಭ ಅಲ್ಲೇ ದಾಖಲಾಗಿದ್ದ ಅಬ್ದುಲ್ ಹಲೀಂ ಎಂಬಾತ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇದಕ್ಕೆ ಮನ್ಸೂರ್ ಅಹಮದ್ ಪತ್ನಿ ಶಮೀನಾ ಬಾನು ಸಹಕಾರ ನೀಡಿದ್ದಾರೆ ಎಂದು ಸಂತ್ರಸ್ಥ ಬಾಲಕಿಯ ತಾಯಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾರ್ಯಾಚರಣೆ ನಡೆಸಿದ ಮಹಿಳಾ ಪೊಲೀಸ್ರು ಶಮೀನಾ ಬಾನು ಅವರನ್ನು ಈ ಮೊದಲೇ ಬಂಧಿಸಿದ್ದು ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಹಲೀಂನನ್ನು ಗೋವಾ ಪೊಲೀಸ್ರು ಮಡಗಾಂವ್‍ನಲ್ಲಿ ಬಂಧಿಸಿದ್ದಾರೆ. ಇಬ್ಬರನ್ನೂ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
