ದ.ಕ. ಜಿಲ್ಲಾಡಳಿತದಿಂದ ಸ್ವಾತಂತ್ರ್ಯೋತ್ಸವ ಆಚರಣೆ : ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಧ್ವಜಾರೋಹಣ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

mangalore independence day

ನಗರವನ್ನು ಕನಸಿನ, ಆಕರ್ಷಣೀಯ ಮತ್ತು ಅಭಿವೃದ್ಧಿ ಪಥದ ಮಂಗಳೂರು ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.

ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ರಾಷ್ಟ್ರ ಧವಜಾರೋಹಣಗೈದು ಸಚಿವರು ಸಂದೇಶ ನೀಡಿದರು.

mangalore independence day

ಈ ಸಂದರ್ಭ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

essan

Related Posts

Leave a Reply

Your email address will not be published.