ಮಂಗಳೂರು: ಜ.26ರಂದು ಕರುನಾಡ ವೈಭವ-2024

ಅವಿನಾಶ್ ಪೋಕ್ ಡಾನ್ಸ್ ಮಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಕರುನಾಡ ವೈಭವ 2024 ರಾಜ್ಯಮಟ್ಟದ ವಿವಿಧ ವಿನೋಧಾವಳಿ ಸ್ಪರ್ಧೆಯು ಜನವರಿ 26ರಂದು ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವಿನಾಶ್ ಅವರು, ಕಾರ್ಯಕ್ರಮಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದಯಾನಂದ ಕತ್ತಲ್‌ಸಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಕರುನಾಡ ವೈಭವ 2024ರ ವೇದಿಕೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಸಂದೇಶ್, ಚೈತನ್ಯ ಕೊಟ್ಟಾರಿ ಉಪಸ್ಥಿತರಿದ್ದರು.
