ಮಂಗಳೂರು: ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ.
ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಮಹೇಶ್ ಎಂಬ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಈಜು ತಜ್ಞರಾದ ಈಶ್ವರ್ ಮಲ್ಪೆ, ಅಗ್ನಿಶಾಮಕ ದಳದವರು ಹುಡುಕಾಟ ಆರಂಭಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಸ್ಥಳದಲ್ಲಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಚುರುಕಿನ ತನಿಖೆ ಕೈಗೊಂಡಿದ್ದಾರೆ.
ಮುಮ್ತಾಜ್ ಅಲಿ ಅವರು ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಯ ಚೇರ್ಮನ್ ಆಗಿದ್ದು, ಸ್ಥಳೀಯ ಜಮಾತ್ ನ ಪ್ರಮುಖರಾಗಿದ್ದಾರೆ. ಮಾಜಿ ಶಾಸಕ ಮೊಯಿದೀನ್ ಬಾವಾ ಹಾಗೂ ಕುಟುಂಬಸ್ಥರು ಸ್ಥಳದಲ್ಲಿದ್ದಾರೆ.