ಮಂಗಳೂರು : ಮೇ 11ರಂದು ಮೂವರು ಸಾಧಕಿಯರಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ

ಮಂಗಳೂರು: ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಮತ್ತು ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ಇವರ ಸಹಯೋಗದಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮೇ 11ರ ಶನಿವಾರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.
ಮಂಗಳೂರಿನ ಜ್ಯೋತಿ ಸರ್ಕಲ್‌ನ ಮಹಿಳಾ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಮೂಡುಬಿದಿರೆಯ ಅಲ್ ಪುರ್ಕಾನ್ ಇಸ್ಲಾಮಿಕ್ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ನಜ್ರನಾ ಶಾಫಿ ಮತ್ತು ಸುರತ್ಕಲ್ ಕೃಷ್ಣಾಪುರದ ಚೈತನ್ಯ ಪಬ್ಲಿಕ್ ಸ್ಕೂಲ್‌ನ ಇಂಗ್ಲಿಷ್ ಟೀಚರ್ ಶಶಿಕಲಾ ಆರ್. ಎಚ್. ಎಮ್, ಫಾತಿಮಾ ಶೇಖ್ ಪ್ರಶಸ್ತಿ ವಿಜೇತರಾದ ಜಾನಕಿ ಪುತ್ರನ್ ಉಳ್ಳಾಲ ಅವರಿಗೆ ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಸ್ವಾಗತ ಬಯಸುವವರು ತುಳು ಸಂಶೋಧನಾ ಕೇಂದ್ರ ಪೇರೂರಿನ ಪೇರೂರು ಜಾರು, ಕರಾವಳಿ ಲೇಖಕಿಯರ -ವಾಚಕಿಯರ ಸಂಘದ ಅಧ್ಯಕ್ಷರಾದ ಡಾ. ಜ್ಯೋತಿ ಚೇಳ್ಯಾರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಹಾಗೂ ಸರ್ವ ಸದಸ್ಯೆಯರು.
