ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೊ: ಪೊಲೀಸ್ ಇಲಾಖೆ ಹೈ ಅಲರ್ಟ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದು, ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಏರ್​ಪೋರ್ಟ್​​​ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಇರಲಿದ್ದು, ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಈ ಕುರಿತಾಗಿ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್​ ಪ್ರತಿಕ್ರಿಯಿಸಿದ್ದು, ವಿಮಾನ ನಿಲ್ದಾಣದಿಂದ ಲೇಡಿಹಿಲ್​​ವರೆಗೂ ವಿಶೇಷ ಭದ್ರತೆ ಒದಗಿಸಲಾಗಿದ್ದು, ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿ, 10 ಜನ ಎಸ್ಪಿ ಹಾಗೂ ಹೆಚ್ಚುವರಿ ಎಸ್ಪಿ ರಾಂಕ್ ಅಧಿಕಾರಿಗಳು, 250 ಡಿವೈಎಸ್ಪಿ ಮತ್ತು ಪಿಎಸ್​ಐ ರಾಂಕ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ವಾಹನ ಸಂಚಾರ, ಪಾರ್ಕಿಂಗ್ ಸೇರಿದಂತೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ರೋಡ್ ಶೊ ಆರಂಭವಾಗುವ ಎರಡು ಗಂಟೆ ಮುನ್ನ ನಿಬಂಧನೆಗಳು ಜಾರಿಯಾಗಲಿವೆ. ರೋಡ್ ಶೊ ಸುತ್ತಮುತ್ತದ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದ್ದು, 3 ದಿನದಿಂದ ಭದ್ರತೆಯ ದೃಷ್ಟಿಕೋನದಲ್ಲಿ ನಿರಂತರ ಡ್ರೋನ್ ಸರ್ವೇ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮೈಸೂರಿನ ಸಮಾವೇಶದ ಬಳಿಕ ಮಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿ, ಅಲ್ಲಿಂದ 7 ಗಂಟೆಗೆ ನಾರಾಯಣಗುರು ವೃತ್ತಕ್ಕೆ ಆಗಮಿಸಿ ಅಲ್ಲಿ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರೋಡ್ ಶೋ ಆರಂಭಿಸುತ್ತಾರೆ. ಮಹಾನಗರ ಪಾಲಿಕೆ ಮುಂಭಾಗದಿಂದ ಬಲ್ಲಾಳ ಬಾಗ್, ಎಂ.ಜಿ.ರಸ್ತೆಯಾಗಿ ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ರಾಷ್ಟ್ರಕವಿ ಗೋವಿಂದ ಪೈ ಸರ್ಕಲ್​​ನಲ್ಲಿ ರಾತ್ರಿ 8 ಗಂಟೆಗೆ ರೋಡ್ ಶೋ ಮುಕ್ತಾಯಗೊಳ್ಳಲಿದೆ.

Related Posts

Leave a Reply

Your email address will not be published.