ಮಂಗಳೂರು: ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ- ವಶಕ್ಕೆ ಪಡೆಯಲು SIT ಸಿದ್ಧತೆ

ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ.

ಸದ್ಯ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದ ಇಮಿಗ್ರೇಶನ್ ಬಳಿಯೇ ಎಸ್‌ಐಟಿ ಪ್ರಜ್ವಲ್ ನನ್ನ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಮಂಗಳೂರು, ಕೊಚ್ಚಿ, ಗೋವಾ, ಬೆಂಗಳೂರಿನ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೂ ಅಲ್ಲೇ ಬಂಧಿಸಿ, ಸ್ಥಳೀಯ ಠಾಣೆಗೆ ಕರೆದೊಯ್ಯಲಾಗುತ್ತದೆ. ಬಳಿಕ ಪ್ರಜ್ವಲ್ ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ನಂತರ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆದುಕೊಂಡು ಹೋಗಲಿದ್ದಾರೆ.

Related Posts

Leave a Reply

Your email address will not be published.