ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ದಾಳಿ – ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೆÇೀರಂ ಮಂಗಳೂರು ಇದರ ವತಿಯಿಂದ ನಗರದ ಕ್ಲಾಕ್‍ಟವರ್ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಸಾವಿರಾರು ಮಂದಿ ಕ್ರೈಸ್ತ ಸಮುದಾಯದವರು, ಧರ್ಮಗುರುಗಳು, ಧರ್ಮಭಗಿನಿಯರು, ಇತರ ಸಮುದಾಯ ಮತ್ತು ಸಂಘಟನೆಗಳ ಸಮಾನ ಮನಸ್ಕರು ಪಾಲ್ಗೊಂಡರಲ್ಲದೆ ಬಿಜೆಪಿ ಸರಕಾರದ ವೈಫಲ್ಯದ ವಿರುದ್ಧ ಘೋಷಣೆ ಕೂಗಿದರು.

ಮುಖ್ಯ ಭಾಷಣಗೈದ ಕಿನ್ನಿಗೋಳಿ ಚರ್ಚ್‍ನ ಧರ್ಮಗುರು ಫಾ. ಪಾವೋಸ್ತಿನ್ ಲೋಬೋ `ಕಾನೂನು ಪ್ರಕಾರ ಎಲ್ಲರೂ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ಸರಕಾರ ಕಲ್ಪಿಸಬೇಕು. ಮಣಿಪುರ ರಾಜ್ಯ ಸರಕಾರವು ಈ ವಿಚಾರದಲ್ಲಿ ತಾರತಮ್ಯ ಎಸಗುತ್ತಿವೆ. ದುರ್ಬಲ ಪ್ರಜೆಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳದ ಸ್ಥಿತಿ ಮಣಿಪುರ ದಲ್ಲಿ ನಿರ್ಮಾಣವಾಗಿದೆ. ಕೇಂದ್ರ ಹಾಗೂ ಮಣಿಪುರ ಸರಕಾರವು ಈ ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದರು.

ಭಗಿನಿ ಸಿಸಿಲಿಯಾ ಮೆಂಡೋನ್ಸಾ, ಮದರ್ ತೆರೇಸಾ ವಿಚಾರ ವೇದಿಕೆಯ ರೊಯ್ ಕ್ಯಾಸ್ಟಲಿನೋ ಮಾತನಾಡಿದರು.

ಈ ಸಂದರ್ಭ ಮಂಗಳೂರು ಧರ್ಮಪ್ರಾಂತದ ಶ್ರೇಷ್ಟ ಧರ್ಮಗುರು ಫಾ. ಮ್ಯಾಕ್ಸಿಂ ನೊರೊನ್ಹಾ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‍ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮಾಜಿ ಮೇಯರ್ ಕೆ.ಅಶ್ರಫ್, ಮಾಜಿ ಉಪಮೇಯರ್ ಮುಹ್ಮಮದ್ ಕುಂಜತ್ತಬೈಲ್, ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್, ಐಸಿವೈಎಂನ ಅನಿಲ್ ಸಿಕ್ವೇರಾ, ಸಂಘಟಕರಾದ ಆಲ್ಪ್ರೆಡ್ ಮನೋಹರ್, ಸ್ಟ್ಯಾನಿ ಲೋಬೋ, ಜಾನ್ ಡಿಸಿಲ್ವಾ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.