ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದಿಂದ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ಆಂಟನಿ ವೇಸ್ಟ್ ಮ್ಯಾನೆಜ್‍ಮೆಂಟ್ ನ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಪೂರೈಸುವಂತೆ ಆಗ್ರಹಿಸಿ ಸಫಾಯಿ ಕರ್ಮಾಚಾರಿ ಕಾರ್ಮಿಕರು ಇಂದು ಕುಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಆಂಟನೀ ವೇಸ್ಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ದುಡಿಯುತ್ತಿರುವ ಕೆಲಸಗಾರರಿಗೆ ಸಿಗಬೇಕಾದ ಬೋನಸ್ಸು, ಭತ್ಯೆ, ವಿಶೇಷ ರಜಾ ವೇತನ ಕನಿಷ್ಟ ವೇತನ ಮತ್ತು ವಿಡಿಎ, ಬೆಳಗಿನ ಉಪಹಾರ ಭತ್ತೆ, ಇತ್ಯಾದಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಬಂದ ಪಾಲಿಕೆಯ ಆಯುಕ್ತ ಆಕ್ಷಯ್ ಶ್ರೀಧರ್ ಮತ್ತು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅವರು ಮಾತನಾಡಿ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಬೆಂಗಳೂರಿನ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ನಾಗಣ್ಣ ಗೌಡ ಗೌಡ, ಕರ್ನಾಟಕ ಹೊರಗುತ್ತಿಗೆ ನೌಕರರ ಸಂಘದ ಮುಖಂಡರಾದ ಎಂ. ಚಂದ್ರ, ಹೊರಗುತ್ತಿಗೆ ನೌಕರರ ಸಂಘದ ಹೋಬಳಿ ವಿಭಾಗದ ಸಂಚಾಲಕ ಅಣ್ಣಪ್ಪ ಕೆರೆಕಾಡು, ವಿವೇಕ್ ಕುಲಾಲ್, ಚೆನ್ನಕೇಶವ, ಪೂವಪ್ಪ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.