ಮಂಗಳೂರು:ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಗೆ ಚಾಲನೆ

ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.

ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯ ಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ.

ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌ ನಿರ್ದೇಶಕ ಡಾ. ಎಂ.ಎ. ಸಲೀಂ, ಎಡಿಜಿಪಿ ಮುರುಗನ್, ಐಜಿಪಿ ಅಮಿತ್ ಸಿಂಗ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಮೊದಲಾದವರಿದ್ದರು.

Related Posts

Leave a Reply

Your email address will not be published.