ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ.
ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.
