ಮಂಗಳೂರು : ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್., ಕಾಲೇಜು ಪ್ರಾಂಶುಪಾಲರಾದ ಅನುಸೂಯ ರೈ, ಜಿಲ್ಲೆಯ ಚುನಾವಣಾ ಐಕಾನ್ ಕಲಾವಿದ ಅರವಿಂದ್ ಬೋಳಾರ್ ಹಾಗೂ ಇತರ ಗಣ್ಯರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಖ್ಯಾತ ವ್ಯಂಗ್ಯಚಿತ್ರಗಾರ ಜಾನ್ ಚಂದ್ರನ್ ಅವರು ಮತದಾರರಲ್ಲಿ ಜಾಗೃತಿ ಮೂಡಿಸಲು ರಚಿಸಿದ ವ್ಯಂಗ್ಯಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಉದ್ಘಾಟಿಸಿದರು.