ಸೆ.2ರಂದು ಪ್ರಧಾನಿ ಮಂಗಳೂರಿಗೆ : ದ.ಕ ಜಿಲ್ಲಾಡಳಿತದಿಂದ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿಯವರ ಸಮಾವೇಶದ ತಾಣವಾಗಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 2 ಲಕ್ಷ ಮಂದಿ ಕುಳಿತುಕೊಳ್ಳಲು ಸಾಧ್ಯವಾಗು ವಂತಹ ಶೀಟ್‍ಗಳನ್ನು ಅಳವಡಿಸಿ ಬೃಹತ್ ಚಪ್ಪರ ಹಾಕುವ ಕಾಮಗಾರಿ ಭರದಿಂದ ಸಾಗುತ್ತಿದೆ. 20 ಅಡಿ ಎತ್ತರ, 60 ಅಡಿ ಉದ್ದ ಹಾಗೂ 80 ಅಡಿ ಅಗಲದ ಸಭಾವೇದಿಕೆ ಸಿದ್ಧಗೊಳಿಸಲಾಗುತ್ತಿದೆ. ಮಳೆ ಬಂದರೆ ನೀರು ಸಭಾಂಗಣದೊಳಗೆ ಬಾರದಂತೆ ಸುತ್ತಲೂ ತಾತ್ಕಾಲಿಕ ಚರಂಡಿ ನಿರ್ಮಿಸಲಾಗುತ್ತಿದೆ. ಪಾರ್ಕಿಂಗ್ ವ್ಯವಸ್ಥೆಗೆ ತಾಣಗಳನ್ನು ಗುರುತಿಸಲಾಗುತ್ತಿದೆ. ಮೈದಾನದಲ್ಲಿ ತಾತ್ಕಾಲಿಕ ನವಮಂಗಳೂರು ಬಂದರಿನಲ್ಲಿ ನಿಗದಿ ಯಾಗಿರುವ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಲೋಕಾರ್ಪಣೆ ಮಾಡುವ ಬಗ್ಗೆಯೂ ರೂಪುರೇಷೆಗಳು ಸಿದ್ಧಗೊಳ್ಳುತ್ತಿವೆ.

ಒಂದು ಮೂಲಗಳ ಪ್ರಕಾರ ಪ್ರಧಾನಿಯವರು ನವಮಂಗಳೂರು ಬಂದರಿಗೆ ತೆರಳಿ ಅಲ್ಲಿ ನಿಗದಿ ಕಾರ್ಯಕ್ರಮಗಳನ್ನು ಪೂರೈಸಿ ಬಳಿಕ ಗೋಲ್ಡ್‍ಫಿಂಚ್ ಸಿಟಿಗೆ ಆಗಮಿಸುತ್ತಾರೆ. ಇನ್ನೊಂದು ಮೂಲಗಳ ಪ್ರಕಾರ ಗೋಲ್ಡ್‍ಫಿಂಚ್ ಸಿಟಿಯಲ್ಲೇ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸುತ್ತಾರೆ. ಪ್ರಧಾನಿಯವರ ಅಧಿಕೃತ ಪ್ರವಾಸ ವೇಳಾಪಟ್ಟಿ ಬಳಿಕ ಇದು ಸ್ಪಷ್ಟವಾಗಲಿದೆ.ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ| ಭರತ್ ಶೆಟ್ಟಿ ವೈ., ವೇದವ್ಯಾಸ ಕಾಮತ್ ಅವರು ಸಿದ್ಧತೆಗಳನ್ನು ಪರಿಶೀಲಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ದಿನೇಶ್ ಕುಮಾರ್ ಸೇರಿದಂತೆ ಪೆÇಲೀಸ್ ಅಧಿಕಾರಿಗಳು, ಟ್ರಾಫಿಕ್ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.