ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ಕುರಿತು ಜಾಗೃತಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ವಿಚಾರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಿದ್ದೇವೆ. ಅದಕ್ಕಾಗಿ 288 ಶಾಲೆ ಮತ್ತು ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು.

ಅವರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಕೆಲವು ವೈದ್ಯರು ಮತ್ತು ಎಫ್‍ಎಸ್ ಎಲ್ ಅಧಿಕಾರಿಗಳು ಸಹ ಭಾಗವಹಿಲಿದ್ದಾರೆ. ಮುಂದಿನ ತಿಂಗಳಿನಲ್ಲಿ 288 ಶಾಲೆ ಮತ್ತು ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತದೆ. ಶಾಲೆ ಕಾಲೇಜು ಸುತ್ತಮುತ್ತಲಿನ ಅಂಗಡಿಗಳಲ್ಲಿ ಗುಟ್ಕ, ಸಿಗರೇಟ್ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.