Mangaluru : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ನಳಿನ್ ಕುಮಾರ್ ಕಟೀಲ್

ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ.
ಗೋ ರಕ್ಷಣೆಗಾಗಿ ಬಿಜೆಪಿ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೈ ಬಿಡುವ ನಿರ್ಧಾರ ಮಾಡುತ್ತಿದೆ. ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾಯಿದೆಯನ್ನು ವಾಪಾಸ್ ಮಾಡುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಕೆಲವು ಆಚರಣೆ ವೇಳೆ ಗೋಹತ್ಯೆ ಆಗುತ್ತಿದೆ. ಪೊಲೀಸರು ಗೋ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜನರ ಭಾವನೆಗಳಿಗೆ ವಿರುದ್ಧವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಹೀಗಾದಲ್ಲಿ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಲಿದೆ ಎಂದು ನಳಿನ್ ಹೇಳಿದರು.
ಪಕ್ಷದಲ್ಲಿ ನಡೆದಿರುವ ಭಿನ್ನಮತದ ಬಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ರೀತಿಯಲ್ಲೂ ಗಲಾಟೆಗಳು ಆಗಿಲ್ಲ. ಪಕ್ಷದ ಎಲ್ಲಾ ಕಾರ್ಯಕರ್ತರು ಮುಂದಿನ ಚುನಾವಣೆ ಬಗ್ಗೆ ತಯಾರಿ ಮಾಡುತ್ತಿದ್ದಾರೆ. ಅದರೂ ಕೆಲವೊಂದು ಕಡೆಗಳಲ್ಲಿ ಹೇಳಿಕೆಗಳಲ್ಲಿ ವ್ಯತಾಸಗಳು ಆಗಿವೆ. ಈ ಬಗೆ ಪಕ್ಷ ನಾಯಕರ ಜೊತೆಯಲ್ಲಿ ಮಾತುಕತೆ ನಡೆಸಿದ್ದೇನೆ.
ಪಕ್ಷದಲ್ಲಿ ಶಿಸ್ತ್ರು ಮುಖ್ಯವಾಗಿದೆ. ಶಿಸ್ತು ಉಲ್ಲಂಘನೆ ಮಾಡಿದವರ ವಿರುದ್ಧ ಈಗಾಗಲೇ ನೋಟಿಸ್ ನೀಡಲಾಗಿದೆ. ಹಾಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಹೇಳಿದರು.