HomeFresh Newsಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆ.23ರಂದು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments