ಮಂಗಳೂರು: ಶಿವಮೊಗ್ಗ ಗಲಾಟೆ ವಿಚಾರ, ಕಾಂಗ್ರೆಸ್ ಸರ್ಕಾರ ಮೃದು ಧೋರಣೆಯೇ ಘಟನೆಗೆ ಕಾರಣ-ಶಾಸಕ ಡಾ. ವೈ. ಭರತ್ ಶೆಟ್ಟಿ
ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಒಂದು ವರ್ಗಕ್ಕೆ ಮೀಸಲಾದ ಮೃದು ನೀತಿಯೇ ಕಾರಣ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಾಡಿದ್ದಾರೆ.
ಸುರತ್ಕಲ್‍ನ ಶಾಸಕ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ವಿವಿಧಡೆ ಕೋಟಿ ಕೋಟಿ ಜನ ಸೇರುವ ಗಣೇಶ ಚತುರ್ಥಿ ಶಾಂತಿಯುತವಾಗಿ ನಡೆದಿದೆ. ಆದರೆ ಮುಸಲ್ಮಾನ ಬಾಂಧವರ ಹಬ್ಬದ ಸಂಭ್ರಮದ ವೇಳೆ ಇಂತಹ ಹಿಂಸಾತ್ಮಕ ಕೃತ್ಯ ನಡೆದಿರುವುದರ ಹಿಂದೆ ಷಡ್ಯಂತ್ರವಿದೆ ಎಂದು ಆರೋಪಿಸಿದರು.