ಮಂಗಳೂರು: ಮಂಗಳೂರಿನಲ್ಲಿ ಅ.17ರಿಂದ 21ರ ತನಕ ರಾಷ್ಟ್ರೀಯ ಓಪನ್ ರೇಟೆಡ್ ಚೆಸ್ ಪಂದ್ಯಾವಳಿ
ರಾಷ್ಟ್ರೀಯ ಓಪನ್ ಮತ್ತು ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿಯು ಅಕ್ಟೋಬರ್ 17ರಿಂದ 21ರ ತನಕ ಮಂಗಳೂರಿನ ಟೌನ್ ಹಾಲ್‍ನಲ್ಲಿ 9 ರೌಂಡ್‍ಗಳ ಸ್ಪರ್ಧೆ ನಡೆಯಲಿದೆ ಎಂದು ಚೆಸ್ ಅಸೋಸಿಯೇಶನ್‍ನ ಅಧ್ಯಕ್ಷರಾದ ರಮೇಶ್ ಕೋಟೆ ಹೇಳಿದರು.
ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಈ ಪಂದ್ಯಾಟಕ್ಕೆ ಬೇರೆ ಬೇರೆ ರಾಜ್ಯಗಳ ಆಟಗಾರರು, ಅಂತರಾಷ್ಟ್ರೀಯ ಮಟ್ಟದ ಆಟಗಾರರು ಸಹಿತ ಸುಮಾರು 400 ಮಂದಿ ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ.
ಈ ಕಾರ್ಯಕ್ರಮದ ಉದ್ಘಾಟನೆಗೆ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‍ವಾಲ್, ಅರವಿಂದ ಶಾಸ್ತ್ರಿ, ಸೇರಿದಂತೆ ಮೊದಲಾದವರು ಭಾಗವಹಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಸುನಿಲ್ ಆಚಾರ್, ಉಪಾಧ್ಯಕ್ಷರಾದ ವಾಣಿ ಎಸ್ ಪಣಿಕ್ಕರ್, ಪೂರ್ಣಿಮಾ ಎಸ್ ಆಳ್ವಾ, ಸತ್ಯಪ್ರಸಾದ್, ರಮ್ಯ ಎಸ್. ರೈ ಉಪಸ್ಥಿತರಿದ್ದರು.