ಮಂಗಳೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ನ.10 ರಂದು ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ
ಮಂಗಳೂರು ಎ.ಬಿ.ಶೆಟ್ಟಿ ಸರ್ಕಲ್‌ನ ಪಾರಡಿಗಂ ಪ್ಲಾಜಾದಲ್ಲಿರುವ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮವು ನ.10 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ್ ಕಾಮತ್ ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಜಂಟಿ ನಿದೇರ್ಶಕರಾಧ ಸುದರ್ಶನ್ ಬಿ ಹೊಳ್ಳ ಅವರು ಪ್ರಸ್ತಾವನೆಗೈಯಲಿದ್ದು, ಶ್ರೀ ರಾಮ್ ಫೈನಾನ್ಸ್‌ನ ಎಂಡಿ ಮತ್ತು ಸಿಇಓ ವೈ.ಎಸ್.ಚಕ್ರವರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುಧೀರ್ ಶೆಟ್ಟಿ ಕಣ್ಣುರು, ಶಾಸಕ ಡಾ.ವೈ.ಭರತ್ ಶೆಟ್ಟಿ, ಮಂಗಳೂರು ಮಹಾ ನಗರ ಪಾಳಿಕೆಯ ವಿರೋಧ ಪಕ್ಷದ ನಾಯಕರಾದ ಪ್ರವೀಣ್ ಚಂದ್ಯ ಆಳ್ವ, ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಜೋನಲ್ ಬ್ಯುಸಿನೆಸ್ ಹೆಡ್ ಶರತ್ ಂದ್ರ ಭಟ್ ಕಾಕುಂಜೆ, ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ರೈ, ಮನಪಾ ಸದಸ್ಯರಾದ ದಿವಾಕರ್, ಮಂಗಳೂರು ಹಿಂದೂ ಯುವ ಸೇನೆಯ ಅಧ್ಯಕ್ಷರಾದ ಭಾಸ್ಕರ್‌ಚಂದ್ರ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷರಾಧ ಧರ್ಮಶ್ರೀ ಡಾ.ಹರಿಕೃಷ್ಣ ಪುನರೂರು, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಹಾಗೂ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ವಿ4 ನ್ಯೂಸ್‌ನ ಯೂಟ್ಯೂಬ್ ಚಾನಲ್‌ನಲ್ಲಿ ನೇರಪ್ರಸಾರಗೊಳ್ಳಲಿದೆ.