ಮಂಗಳೂರು: ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆಯು ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ದೇಶ ಮೊದಲು ಎನ್ನುವ ಸಿದ್ಧಾಂತಕ್ಕೆ ತಕ್ಕಂತೆ ಸೈನ್ಯದಲ್ಲಿ ಸೇವೆ ಸಲ್ಲಿಸಿ, ಇದೀಗ ಜನಸೇವೆಗೆ ಬಂದಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ನಮ್ಮ ಜಿಲ್ಲೆಯಿಂದ ನರೇಂದ್ರ ಮೋದಿಯಂತಹ ವಿಶ್ವ ನಾಯಕನ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಜಿಲ್ಲೆಯ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಲೋಕಸಭೆಗೆ ಕಳುಹಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದ್ದು. ಈಗಾಗಲೇ ದೇಶದೆಲ್ಲೆಡೆ ಬಿಜೆಪಿ ಪರ ವಾತಾವರಣವಿದ್ದು ಮತ್ತೊಮ್ಮೆ ದೇಶಕ್ಕೆ ನರೇಂದ್ರ ಮೋದಿಯವರೇ ಪ್ರಧಾನಿಯಾಗಬೇಕೆಂಬುದು ಹಳ್ಳಿಯಿಂದ ದಿಲ್ಲಿವರೆಗಿನ ಜನಸಾಮಾನ್ಯರ ಅಭಿಪ್ರಾಯವಾಗಿದೆ ಎಂದರು.

ಈ ಸಂದರ್ಭದಲ್ಲಿ ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಉಪಾಧ್ಯಕ್ಷ ಹಾಗೂ ಮಂಡಲದ ಚುನಾವಣಾ ಪ್ರಭಾರಿಗಳಾದ ರಾಕೇಶ್ ರೈ, ಲೋಕಸಭಾ ಚುನಾವಣಾ ಮಂಡಲದ ಪ್ರಭಾರಿಗಳಾದ ರವಿಶಂಕರ್ ಮಿಜಾರ್, ಲೋಕಸಭಾ ಚುನಾವಣಾ ಮಂಡಲ ಸಂಚಾಲಕರಾದ ವಿಜಯ್ ಕುಮಾರ್ ಶೆಟ್ಟಿ, ಮಂಡಲದ ಉಪಾಧ್ಯಕ್ಷರಾದ ದೀಪಕ್ ಪೈ ಹಾಗೂ ವಿನೋದ್ ಮೆಂಡನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳದ ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಪಶ್ಚಿಮ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮೋಹನ್ ಪೂಜಾರಿ, ಕಾರ್ಯದರ್ಶಿ ರಾಜೇಂದ್ರ ವಿ.ಪಿ, ಸಹಿತ ಹಲವು ಪ್ರಮುಖರು ಹಾಗೂ ವಿವಿಧ ಮೋರ್ಚಾಗಳ, ಪ್ರಕೋಷ್ಠಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.