ಮಂಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನ ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬಿಜೆಪಿ ದಕ್ಷಿಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಜನತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿದ್ದೀರಿ.ಗ್ಯಾರಂಟಿ ನೀಡ್ತೇವೆ ಹೇಳಿ ಅಧಿಕಾರಕ್ಕೆ ಬಂದು. ಇದೀಗಾ ವಿದ್ಯುತ್ ದರ ಯುನಿಟ್‍ಗೆ 75 ಶೇ ಹೆಚ್ಚಳ ಮಾಡಿದೆ. ಉಚಿತ ಭಾಗ್ಯದ ಗಡಿಬಿಡಿಯಲ್ಲಿ ರಾಜ್ಯ ಬೊಕ್ಕಸಕ್ಕೆ ಕೈಹಾಕಿದ್ದೀರಿ. ಬಿಜೆಪಿ ರಾಜ್ಯದ ಜನತೆ ನೀಡಿದ ಅಭಿವೃದ್ಧಿ ಯೋಜನೆಗಳನ್ನು ಸ್ಥಗಿತ ಮಾಡಿದ್ದೀರಿ.
ನಿಮಗೆ ತಾಕತ್ತು ಇದ್ದರೆ ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಜಾರಿ ಮಾಡಿ ಎಂದು ಸವಾಲು ಹಾಕಿದರು. ಈ ವೇಳೆ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಶೆಟ್ಟಿ, ಪ್ರೇಮಾನಂದ ಶೆಟ್ಟಿ, ರೂಪಾ.ಡಿ. ಬಂಗೇರ ಸೇರಿದಂತೆ ಇನ್ನಿತರ ನಾಯಕರು ಉಪಸ್ಥಿತರಿದ್ದರು.