ಕ್ರಿಮಿನಲ್‍ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ : ಸಚಿವ ದಿನೇಶ್ ಗುಂಡೂರಾವ್
ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ, ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ ಎಂದು ಹೇಳಿದ ಅವರು ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಠಿಸೋದನ್ನು ದಬ್ಬಾಳಿ ಸಹಿಸಲು ಸಾಧ್ಯವಿಲ್ಲ ಈ ಕುರಿತು ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ, ವಿದ್ಯಾರ್ಥಿಗಳಿಗೆ ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಆಗುತ್ತಿದೆ, ಆಡ್ಮಿಷನ್ ಆಗಿದೆ ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಅಂತಾ ಕೆಲ ವಿದ್ಯಾರ್ಥಿಗಳು ನನ್ನ ಬಳಿ ಹೇಳಿದ್ದರು ಭಯ ಪಡಬೇಡಿ ಅಂತಾ ವಿದ್ಯಾರ್ಥಿಗಳಿಗೆ ಹೇಳಿದ್ದೇನೆ ಎಂದರು.
ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ಕೆಲಸ ನಡೆಯುತ್ತಿದೆ, ಅಲ್ಲದೆ ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸೇರಿಕೊಳ್ಳುತ್ತಿದೆ, ಈ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ, ಇಂತಹ ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ ಎಂದರು. ಬಿಜೆಪಿಗೆ ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ್ವಾ ಬಿಜೆಪಿ ಜಿಲ್ಲೆಯ ಶಾಂತಿಗೆ ಸಹಕಾರವನ್ನು ನೀಡಬೇಕು ಎಂದು ಹೇಳಿದರು.