ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಚಾಲಕ ಅಪಾಯದಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿ ಕಾರೋಂದು ಪಲ್ಟಿಯಾಗಿ ಸರ್ವೀಸ್ ರಸ್ತೆಯಿಂದ ಪಕ್ಕದ ಕಮರಿಗೆ ಉರುಳಿದ ಘಟನೆ ಸುರತ್ಕಲ್ ಎನ್‌ಐಟಿಕೆ ಬಳಿ ನಡೆದಿದೆ.



ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿಕರಿಲ್ಲದ ಕಾರಣ ಬಹುದೊಡ್ಡ ದುರಂತ ತಪ್ಪಿ ಹೋಗಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರು ಪಲ್ಟಿಯಾದ ರಭಸಕ್ಕೆ ನಜ್ಜುಗುಜ್ಜಾಗಿದೆ. ಓವರ್ ಸ್ಪೀಡ್ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.