ಮಂಗಳೂರು: ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಕಾರ್ಯಕ್ರಮ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಜರುಗಿತು.
ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 15 ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು ಹಾಗೂ ಹುಲಿವೇಷ ತಂಡಗಳನ್ನು ಪೆÇ್ರೀತ್ಸಾಹಿಸಲು ಆಗಮಿಸುವ ಎಲ್ಲರಿಗೂ ಸುಸ್ವಾಗತ, ಒಟ್ಟಾರೆಯಾಗಿ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಮ. ನ. ಪಾ. ಸದಸ್ಯರುಗಳಾದ ಶಕೀಲಾ ಖಾವ, ಜಯಲಕ್ಷ್ಮಿ, ಭರತ್ ಸೂಟರ್ ಪೇಟೆ, ಹಾಗೂ ನರೇಶ್ ಶೆಣೈ , ಉದಯ ಪೂಜಾರಿ, ಅಶ್ವಿತ್ ಕೊಟ್ಟಾರಿ, ಲಲಿತ್ ರಾಜ್ ಮೆಂಡನ್, ಕಮಲಾಕ್ಷ ಬಜಿಲ್ಕೇರಿ, ಮೋಹನ್ ಪೂಜಾರಿ, ಜಗದೀಶ್ ಕದ್ರಿ, ಚೇತನ್ ಕಾಮತ್, ಸೂರಜ್ ಕಾಮತ್, ಮುಂತಾದವರು ಉಪಸ್ಥಿತರಿದ್ದರು.